ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2018ರ 'ಚಾಂಪಿಯನ್ಸ್'
ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ 2018ರ ಫೈನಲ್ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿ, ಐಪಿಎಲ್ ಪ್ರಶಸ್ತಿಗೆ ಮುತ್ತಿಟ್ಟಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆದ ಪೈನಲ್ ಹಣಾಹಣಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ನೀಡಿದ 179 ರನ್ ಗಳ ಸವಾಲಿನ ಗುರಿಯನ್ನು ಮೆಟ್ಟಿನಿಂತ ಧೋನಿ ಪಡೆ ಭರ್ಜರಿ ಗೆಲುವು ದಾಖಲಿಸಿತು. ಚೆನ್ನೈ ಗೆಲುವಿನಲ್ಲಿ ತಂಡದ ಸ್ಫೋಟಕ ಬ್ಯಾಟ್ಸಮನ್ ಶೇನ್ ವಾಟ್ಸನ್ ಮಹತ್ತರ ಪಾತ್ರ ವಹಿಸಿದರು.
YOU MAY ALSO LIKE
No comments