ನಿಫಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ನಿಯೋಜಿತ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಸೂಚನೆ
ನಿಯೋಜಿತ ಸಿಎಂ ಹೆಚ್. ಡಿ. ಕುಮಾರಸ್ವಾಮಿ |
ಮಾರಕ ನಿಫಾ ವೈರಾಣು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಕೇರಳದಲ್ಲಿ ಮಾರಕ ನಿಫಾ ವೈರಾಣು ವ್ಯಾಪಕವಾಗಿ ಹರಡುತ್ತಿದ್ದು, ಜನರಲ್ಲಿ ಆತಂಕ ಉಂಟು ಮಾಡಿದೆ. ಈ ವೈರಾಣು ರಾಜ್ಯದ ಗಡಿಭಾಗದಲ್ಲಿ ಹರಡದಂತೆ ತಡೆಯಲು ಅಗತ್ಯ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.
ಕೇರಳದಲ್ಲಿ ಈಗಾಗಲೇ 10 ಮಂದಿ ನಿಫಾ ವೈರಾಣು ಸೋಂಕಿನಿಂದ ಮೃತಪಟ್ಟಿದ್ದಾರೆ. ಕೇರಳ ರಾಜ್ಯಕ್ಕೆ ಹೊಂದಿರುವ ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೂ ಈ ವೈರಾಣು ವ್ಯಾಪಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
YOU MAY ALSO LIKE
No comments