Breaking News

ಉಸಿರಾಟದ ತೊಂದರೆ: ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಗೆ ದಾಖಲು


ನವದೆಹಲಿ: ಕಳೆದ ಹಲವು ವರ್ಷಗಳಿಂದ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ದೆಹಲಿಯ ಇಂಡಿಯನ್ ಇನ್ ಸ್ಟಿಟ್ಯೂಟ್ ಮೆಡಿಕಲ್ ಸೈನ್ಸ್ ಸ್(ಏಮ್ಸ್) ಗೆ ದಾಖಲಿಸಲಾಗಿದೆ.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ 93 ವಯೋಮಾನದ ವಾಜಪೇಯಿ ಅವರಿಗೆ ಡಾ.ರಣದೀಪ್ ಗುಲೆರಿಯಾ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಇದು ಅವರ ಆರೋಗ್ಯದ ಸಾಮಾನ್ಯ ಪರೀಕ್ಷೆಯಾಗಿದೆ ಎಂದು ಬಿಜೆಪಿ ಪ್ರಕಟನೆಯಲ್ಲಿ ತಿಳಿಸಿದೆ.
ಅಟಲ್ ಬಿಹಾರಿ ವಾಜಪೇಯಿ ಅವರು ಭಾರತೀಯ ಜನತಾ ಪಕ್ಷದ ನೇತೃತ್ವದ ಎನ್ ಡಿಎ ಮೈತ್ರಿ ಕೂಟದಲ್ಲಿ 1998 ರಿಂದ 2004 ರವರೆಗೆ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಅವರು ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.

YOU MAY ALSO LIKE



No comments