ವಿದ್ಯಾರ್ಥಿಗಳಿಗೆ ಇದೇ 7ರಿಂದ ಬಸ್ ಪಾಸ್ ವಿತರಣೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಸಕ್ತ ಸಾಲಿನ ಒಂದರಿಂದ ಹತ್ತನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಇದೇ 7 ರಿಂದ ಬಸ್ ಪಾಸ್ ವಿತರಣೆ ಮಾಡಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗುತ್ತದೆ. ಸದರಿಯವರು ಸಂಸ್ಕರಣಾ ಶುಲ್ಕ ಹಾಗೂ ಅಪಘಾತ ಪರಿಹಾರ ನಿಧಿ (ಒಟ್ಟು ರೂ.150/-) ಮೊತ್ತವನ್ನು ಪಾವತಿಸಬೇಕಿರುತ್ತದೆ. ಈ ವರ್ಗದ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಜೊತೆಗೆ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸಬೇಕು.
ನಿಗಮದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಹಾಗೂ ನಿಗಮದ ವೆಬ್‍ಸೈಟ್‍ನಲ್ಲಿ www.ksrtc.in ಪಾಸ್ ಅರ್ಜಿಗಳು ಲಭ್ಯವಿರುತ್ತದೆ. ಭರ್ತಿಗೊಳಿಸಿದ ಅರ್ಜಿಗಳನ್ನು ಶಾಲೆಗಳಲ್ಲಿ ದೃಢೀಕರಿಸಬೇಕಿರುತ್ತದೆ. ವಿದ್ಯಾರ್ಥಿಗಳು ಅಭ್ಯಸಿಸುತ್ತಿರುವ ಶಾಲೆಗಳ ಮುಖಾಂತರ ಬಸ್ ಪಾಸ್‍ಗಳನ್ನು ವಿತರಿಸಲಾಗುವುದು. ವಿದ್ಯಾರ್ಥಿಗಳು ನೇರವಾಗಿ ಪಾಸ್ ಕೌಂಟರ್‍ಗೆ ಬರುವ ಅವಶ್ಯಕತೆಯಿರುವುದಿಲ್ಲ. ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ಕೆಎಸ್‍ಆರ್‍ಟಿಸಿ ಸಂಸ್ಥೆ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ವೆಬ್‍ಸೈಟ್‍ನಲ್ಲಿ ಪಾಸ್ ಅರ್ಜಿಯನ್ನು ಪಡೆದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ Download
YOU MAY ALSO LIKE
No comments