ವಿಧಾನಪರಿಷತ್ತಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆ
ವಿಧಾನ ಪರಿಷತ್ತು |
ವಿಧಾನಪರಿಷತ್ತಿಗೆ ನಡೆಯಬೇಕಿದ್ದ ಚುನಾವಣೆಗೆ ೧೧ ಮಂದಿಯಿಂದ ಮಾತ್ರ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ನಾಮಪತ್ರ ವಾಪಸಾತಿಗೆ ೩ ಗಂಟೆಗಳ ಕಾಲಾವಕಾಶ ನೀಡಲಾಗಿತ್ತು. ಆದರೆ ಯಾರು ನಾಮಪತ್ರ ಹಿಂಪಡೆದುಕೊಳ್ಳಲಿಲ್ಲ. ೧೧ ಸ್ಥಾನಗಳಿಗೆ ೧೧ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಾದಕಾರಣ ಎಲ್ಲರನ್ನು ಅವಿರೋಧವಾಗಿ ಆಯ್ಕೆಯಾಗಿದ್ದರೆಂದು ಘೋಷಿಸಲಾಯಿತು.
ಬಿಜೆಪಿ ಯಿಂದ ರಘನಾಥ್ ರಾವ್ ಮಲ್ಕಾಪುರೆ, ತೇಜಸ್ವಿನಿ ಗೌಡ, ಕೆ.ಪಿ.ನಂಜುಂಡಿ, ಎಸ್ ರುದ್ರೇಗೌಡ, ರವಿಕುಮಾರ್ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ನಿಂದ ಸಿ.ಎಂ.ಇಬ್ರಾಹಿಂ, ಕೆ. ಗೋವಿಂದರಾಜ್, ಅರವಿಂದ ಕುಮಾರ್ ಅರಳಿ ಮತ್ತು ಕೆ.ಹರೀಶ್ ಕುಮಾರ್ ಆಯ್ಕೆಯಾಗಿದ್ದಾರೆ.
ಜೆಡಿಎಸ್ ನಿಂದ ಬಿ.ಎಂ.ಫಾರೂಕ್ ಮತ್ತು ಎಸ್.ಎಲ್ ಧರ್ಮೇಗೌಡ ಆಯ್ಕೆಯಾಗಿದ್ದಾರೆ.
ಈ ಕುರಿತು ಜೂನ್ 11 ರಂದು ಚುನಾವಣಾಧಿಕಾರಿಗಳು ಅಧಿಕೃತವಾಗಿ ಅಧಿಸೂಚನೆ ಪ್ರಕಟಿಸಲಿದ್ದಾರೆ.
YOU MAY ALSO LIKE
No comments