ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ!
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರು ಯುವನಾಯಕ ಎಂದು ಕರೆಸಿಕೊಂಡರೂ ಸದ್ಯ ಅವರು ತಮ್ಮ 48ನೇ ಉಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ರಾಜಕೀಯದಲ್ಲಿ ವಿರೋಧಿಗಳಾದರೂ ಕೂಡಾ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಘನತೆ ಮೆರೆದಿದ್ದು, ರಾಹುಲ್ ಗಾಂಧೀ ಹುಟ್ಟುಹಬ್ಬಕ್ಕೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಟ್ವಿಟ್ಟರ್ ನಲ್ಲಿ ಶುಭಾಶಯದ ಸಂದೇಶವನ್ನು ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿಯವರಿಗೆ ಆಯುರಾರೋಗ್ಯ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಹುಟ್ಟು ಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್, ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಾ ಶುಭಾಶಯ ಕೋರಿದ್ದಾರೆ.
YOU MAY ALSO LIKE
No comments