ಅಮರನಾಥ ಯಾತ್ರೆಗೆ ಸ್ವತಃ ಭದ್ರತೆ ಪರಿಶೀಲಿಸಿದ ನಿರ್ಮಲಾ ಸೀತಾರಾಮನ್
ಕಾಶ್ಮೀರ : ಜಮ್ಮು ಕಾಶ್ಮೀರದಲ್ಲಿ ಅಮರನಾಥ ಯಾತ್ರೆಗೆ ಉಗ್ರರ ಕರಿನೆರಳು ಬಿದ್ದ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಬಿಗಿ ಬಂದೋಬಸ್ತನ್ನು ಕೈಗೊಳ್ಳಲಾಗಿದ್ದು, ಅಮರನಾಥ ಯಾತ್ರೆ ಸುರಕ್ಷತೆಯ ಬಗ್ಗೆ ಪರಿಶೀಲಿಸಲು ಕಾಶ್ಮೀರಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಭೇಟಿ ನೀಡಿದರು.
ಈ ಸಂದರ್ಭ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಉತ್ತರ ಸೇನಾ ಕಮಾಂಡರ್ ಮತ್ತು ಲೆಫ್ಟಿನೆಂಟ್ ಜನರಲ್ ಎ.ಕೆ. ಭಟ್ ಉಪಸ್ಥಿತರಿದ್ದರು.ಜೂನ್ 27 ರಿಂದ ಪ್ರಾರಂಭವಾಗುವ ಅಮರನಾಥ ಯಾತ್ರೆಗೆ ಭದ್ರತೆ ಮತ್ತು ಆಡಳಿತಾತ್ಮಕ ವ್ಯವಸ್ಥೆಗಳ ಬಗ್ಗೆ ರಕ್ಷಣಾ ಸಚಿವರಿಗೆ ಸೇನಾ ಸಿಬ್ಬಂದಿ ಮಾಹಿತಿ ನೀಡಿದರು.
YOU MAY ALSO LIKE
No comments