ಹೊಸ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ!
![]() |
| ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ |
ಟೀಂ ಇಂಡಿಯಾದ ಹಾಲಿ ನಾಯಕ ವಿರಾಟ್ ಕೊಹ್ಲಿ, ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ದಾಖಲೆಯನ್ನು ಧೂಳಿಪಟ ಮಾಡಿದ್ದಾರೆ.
ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ನಾಯಕನಾಗಿ 3000 ರನ್ ಪೂರೈಸಿದ ಗುಂಪಿಗೆ ಸೇರಿಕೊಂಡಿದ್ದಾರೆ.
ಎಂಎಸ್ ಧೋನಿ 70 ಇನ್ನಿಂಗ್ಸ್ ಹಾಗೂ ಎಬಿ ಡಿವಿಲಿಯರ್ಸ್ 60 ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ್ದರೆ ವಿರಾಟ್ ಕೊಹ್ಲಿ ನಾಯಕನಾಗಿ 52 ಪಂದ್ಯಗಳಲ್ಲಿ 49ನೇ ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ್ದಾರೆ.
ವಿರಾಟ್ ಕೊಹ್ಲಿ 83.41ರ ಬ್ಯಾಟಿಂಗ್ ಸರಾಸರಿ ಹೊಂದಿದ್ದಾರೆ. ಒಟ್ಟಾರೆ 52 ಪಂದ್ಯಗಳಲ್ಲಿ 13 ಶತಕ ಬಾರಿಸಿದ್ದಾರೆ.
YOU MAY ALSO LIKE





No comments