ಜು. 9 ರಂದು ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯಿತ್ತಿದ್ದು, ಜನಜೀವನ ಅಸ್ಥವ್ಯಸ್ಥ ಉಂಟಾಗಿದೆ. ಜು.8 ರಂದು ಸುರಿದ ತೀವ್ರ ಮಳೆಯ ಹಿನ್ನೆಲೆಯಲ್ಲಿ ಜು.9 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಶೆಶಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಜು.9 ರಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ. ಜು.11ರವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಕೆಯ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಒಂದು ದಿನದ ಮಟ್ಟಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿರಿ : ಇಂಗ್ಲೆಂಡ್ ವಿರುದ್ದ ಭಾರತಕ್ಕೆ ಗೆಲುವು
YOU MAY ALSO LIKE
No comments