ಸಾವು ಬದುಕಿನ ನಡುವೆ ಹೋರಾಡುತ್ತಿರುವ ಅಜಾತಶತ್ರು
ವಯೋ ಸಹಜ ಅನಾರೋಗ್ಯ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ರಾಜಕೀಯ ಪ್ರಮುಖ ನಾಯಕರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಭೇಟಿ ನೀಡಿದರು.
93 ವರ್ಷದ ವಾಜಪೇಯಿ ಅವರನ್ನು ಜೂನ್ 11 ರಂದು ಮೂತ್ರ ಪಿಂಡ , ಮೂತ್ರನಾಳ ಮತ್ತು ಹೃದಯ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಅವರನ್ನು ತೀವ್ರನಿಘಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ದಿನೇ ದಿನೇ ಅವರ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿದ್ದು, ಇಂದು ವಿಷಮ ಸ್ಥಿತಿ ತಲುಪಿದೆ.
YOU MAY ALSO LIKE
No comments