ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿಲ್ಲ - ಜೇಟ್ಲಿ
ಫ್ರಾನ್ಸ್ ನಿಂದ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಭಾರಿ ಅಕ್ರಮ ಅವ್ಯವಹಾರಗಳು ನಡೆದಿವೆ ಎಂಬ ಕಾಂಗ್ರೆಸ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಈ ವಿಷಯದಲ್ಲಿ ವಿರೋಧ ಪಕ್ಷಗಳು ದೇಶದ ಭದ್ರತೆಯ ವಿಷಯದಲ್ಲಿ ಚೆಲ್ಲಾಟವಾಡುತ್ತಿವೆ ಎಂದು ಆರೋಪಿಸಿದ್ದಾರೆ.
ಫೇಸ್ ಬುಕ್ ಬ್ಲಾಗನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಜೇಟ್ಲಿ ರಫೆಲ್ ಜೆಕ್ ಖರೀದಿ ವಿಷಯದಲ್ಲಿ ಕಾಂಗ್ರೆಸ್ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ೨೦೦೭ ರಲ್ಲಿ ಯುಪಿಎ ಸರಕಾರ ಮಾಡಿಕೊಂಡಿದ್ದ ಒಪ್ಪಂದಕ್ಕಿಂತಲೂ ಅತ್ಯಂತ ಕಡಿಮೆ ಮತ್ತು ಉತ್ತಮ ದರದೊಂದಿಗೆ ವಹಿವಾಟು ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಈ ವಿಷಯದಲ್ಲಿ ರಾಷ್ಟ್ರೀಯ ಭದ್ರತೆ ಮತ್ತು ಸುರಕ್ಷತೆಯೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.
No comments