Breaking News

ಸಿದ್ದರಾಮಯ್ಯ ನಿವಾಸಕ್ಕೆ ಹೆಚ್.ಡಿ.ಕೆ. ಬೇಟಿ..!

CM-Kumaraswamy-Meets-Siddaramaiah

ಬೆಂಗಳೂರು: ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸಿದ್ದರಾಮಯ್ಯ ನಿವಾಸಕ್ಕೆ ದಿಡೀರ್ ಎಂದು ಬೇಟಿ ನೀಡಿ ಒಂದು ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿದರು. 

ಕುಮಾರಸ್ವಾಮಿಯವರು ಇದೇ ಮೊದಲಬಾರಿಗೆ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಆಗಮಿಸಿ, ಸದ್ಯ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಡಿಸಿಎಂ ಜಿ. ಪರಮೇಶ್ವರ್, ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಮತ್ತು  ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬಾಗಿಯಾಗಿದ್ದರು. 

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಮಾಲೋಚನೆಯಲ್ಲಿ ಆಪರೇಷನ್ ಕಮಲದ ಬೀತಿ,  ಪ್ರತಿತಂತ್ರ , ಬಿಜೆಪಿಯ ವಿರುದ್ಧ "ದಂಗೆ" ಹೇಳಿಕೆ ಬಳಸಿಕೊಂಡು ರಾಜ್ಯಪಾಲರ ಬೇಟಿ ಹಾಗು ಸರಕಾರವನ್ನು ಸ್ಥಿರವಾಗಿ ನಡೆಸಿಕೊಂಡು ಹೋಗಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿದುಬಂದಿದೆ. 





SPONSORED CONTENT



No comments