ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : ನಾಳೆ ಮತ ಎಣಿಕೆ.
ಮಹಾನಗರ ಪಾಲಿಕೆ, ನಗರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಆ. 31 ರಂದು ನಡೆದ ಚುನಾವಣೆಯ ಮತ ಎಣಿಕೆ ನಾಳೆ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಳ್ಳಲಿದ್ದು, ಮಧ್ಯಾಹ್ನದ ಹೊತ್ತಿಗೆ ಪಲಿತಾಂಶ ಹೊರಬೀಳುವ ಸಾಧ್ಯತೆಗಳಿವೆ.
ಮೂರೂ ಮಹಾನಗರ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯತ್, ಪುರಸಭೆ ಸೇರಿದಂತೆ 102 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು, ನಾಳೆ ಬೆಳಿಗ್ಗೆಯಿಂದ ಜಿಲ್ಲಾ ತಾಲೂಕು ಕೇಂದ್ರಗಳಲ್ಲಿ ಮತಎಣಿಕೆ ಕಾರ್ಯ ನಡೆಯಲಿದೆ. ಮತೆಎಣಿಕೆಯ ಸಲುವಾಗಿ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ.
ಒಟ್ಟು 2634 ವಾರ್ಡ್ ಗಳಿಗೆ ಬಿಜೆಪಿ, ಕಾಂಗ್ರೆಸ್ , ಜೆಡಿಎಸ್ , ಪಕ್ಷೇತರರು ಸೇರಿದಂತೆ 9121 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ನಾಳೆ ಗೊತ್ತಾಗಲಿದೆ.
No comments