ಮುಖ್ಯನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್ ನೇಮಕ.
ಮುಖ್ಯನ್ಯಾಯಮೂರ್ತಿಯಾಗಿ ನೇಮಕಗೊಂಡ ರಂಜನ್ ಗೊಗೊಯ್ |
ನವದೆಹಲಿ: ರಂಜನ್ ಗೊಗೊಯ್ ಅವರನ್ನು ಸುಪ್ರೀಂಕೋರ್ಟ್ ನ 46 ನೇ ಮುಖ್ಯ ನ್ಯಾಯಮೂರ್ತಿಯನ್ನಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ನೇಮಕ ಮಾಡಿದ್ದಾರೆ.
ಅಕ್ಟೋಬರ್ 2 ರಂದು ಹಾಲಿ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿರುವ ದೀಪಕ್ ಮಿಶ್ರಾ ಅವರು ನಿವೃತ್ತರಾಗಲಿದ್ದಾರೆ. ಅಕ್ಟೋಬರ್ 3 ರಂದು ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಗುವಾಹಟಿ ಹೈಕೋರ್ಟ್ ಗೆ 2001 ರಲ್ಲಿ ನ್ಯಾಯಮೂರ್ತಿಗಳಾಗಿ ಮತ್ತು 2012 ರಿಂದ ಸುಪ್ರೀಂಕೋರ್ಟ್ ನ ಎರಡನೇಯ ಹಿರಿಯ ನ್ಯಾಯಮೂರ್ತಿಗಳಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ರಂಜನ್ ಗೊಗೊಯ್ ಅವರು ಅಪಾರ ಅನುಭವವನ್ನು ಹೊಂದಿದವರಾಗಿದ್ದಾರೆ. ಅಲ್ಲದೇ ಇವರ ಹೆಸರನ್ನು ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಹಾಲಿ ಸಿಜೆಐ ದೀಪಕ್ ಮಿಶ್ರಾ ಅವರೇ ಶಿಫಾರಸು ಮಾಡಿದ್ದಾರೆ.
No comments